Sale!

ಅವಿಶ್ರಾಂತ ಧ್ಯೇಯಜೀವಿ ಮೈ. ಚ. ಜಯದೇವ: ಬದುಕು –ನೆನಪು- Avishrant Dhyeyjivi

ರಾಷ್ಟ್ರೋತ್ಥಾನ ಪರಿಷತ್ತಿನ ರೂವಾರಿ ಹಾಗೂ ಆರ್‌ಎಸ್‌ಎಸ್ ಹಿರಿಯ ಪ್ರಚಾರಕ ಮೈ. ಚ. ಜಯದೇವ ಅವರ ಜೀವನ ಚರಿತ್ರೆ ‘ಅವಿಶ್ರಾಂತ ಧ್ಯೇಯಜೀವಿ’.

Original price was: ₹200.00.Current price is: ₹190.00.

3 in stock

Compare

Description

ಶ್ರೀ ಮೈ.ಚ. ಜಯದೇವ ಅವರು ರಾಷ್ಟ್ರೋತ್ಥಾನ ಪರಿಷತ್ತನ್ನು ಆರಂಭದ ದಿನಗಳಿಂದಲೂ (1965) ಕಟ್ಟಿ ಬೆಳೆಸಿದವರು. ವ್ಯವಸ್ಥಾಕುಶಲರೂ, ಅಸಾಮಾನ್ಯ ದಕ್ಷರೂ, ಸಂಘಟನೆಯ ರೂವಾರಿಗಳೂ ಆಗಿ ಒಂದು ಜೀವನ, ಒಂದು ಧೈಯಾನುಸಂಧಾನ ಎಂಬ ಸೂತ್ರವನ್ನು ಜೀವನದುದ್ದಕ್ಕೂ ಪಾಲಿಸುತ್ತ ತಮ್ಮ ದೂರದರ್ಶಿ ಚಿಂತನೆ, ರಾಷ್ಟ್ರನಿಷ್ಠ ಕರ್ತವ್ಯಪ್ರಜ್ಞೆ, ಕಠಿಣ ಪರಿಶ್ರಮದ ಮೂಲಕ ಸ್ವಸ್ಥ ಸಮಾಜನಿರ್ಮಾಣದ ವಿವಿಧ ಕ್ಷೇತ್ರಗಳಲ್ಲಿ ರಾಷ್ಟೋತ್ಥಾನ ಪರಿಷತ್ತು ಸ್ಥಿರ ಹೆಜ್ಜೆಗಳನ್ನಿಟ್ಟು ಮುನ್ನಡೆಯಲು ಕಾರಣೀಭೂತರಾದರು.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಬೆಂಗಳೂರು ಮಹಾನಗರ ಕಾರ್ಯವಾಹ, ಪ್ರಾಂತ ಕಾರ್ಯವಾಹ, ಕ್ಷೇತ್ರೀಯ ಕಾರ್ಯವಾಹ, ಕ್ಷೇತ್ರೀಯ ಪ್ರಚಾರಕ, ಅಖಿಲ ಭಾರತೀಯ ಕಾರ್ಯಕಾರಿಣಿಯ ಆಮಂತ್ರಿತ ಸದಸ್ಯರು – ಹೀಗೆ 5 ದಶಕಗಳಿಗೂ ಹೆಚ್ಚು ಕಾಲ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿ ಸಂಘದ ಬೇರುಗಳನ್ನು ಗಟ್ಟಿಗೊಳಿಸಿದವರು. ಮಿಥಿಕ್ ಸೊಸೈಟಿ, ಗೋಖಲೆ ಸಾರ್ವಜನಿಕ ವಿಚಾರ ಸಂಸ್ಥೆ ಅಮೃತ ಶಿಶುನಿವಾಸ, ಅಬಲಾಶ್ರಮ – ಹೀಗೆ ಬೆಂಗಳೂರಿನ ಅನೇಕ ಸಾಮಾಜಿಕ ಸಂಸ್ಥೆಗಳಿಗೆ ಮಾರ್ಗದರ್ಶಕರಾಗಿ ನಿಂತವರು.

ಈ ಎಲ್ಲ ಸಂಸ್ಥೆಗಳು ಮೂಲೋದ್ದೇಶದಂತೆ ಸ್ವತಂತ್ರವಾಗಿ ಕಾರ್ಯನಿರ್ವಹಿಸಲು ಪ್ರೇರಣೆ ನೀಡುವುದರ ಜೊತೆಜೊತೆಗೆ ಅಗತ್ಯ ವ್ಯವಸ್ಥೆ-ವ್ಯಕ್ತಿ ಜೋಡಣೆಯಂತಹ ಕೆಲಸಗಳನ್ನೂ ತೆರೆಯ ಹಿಂದೆ ನಿಂತು ಮಾಡಿದವರು ಮೈ.ಚ. ಜಯದೇವ್.

Publisher : Rashtrotthana Sahitya ; Paperback ; Pages : 186 ; Author : Babu Krishnamurty, Beluru Sudarshan

Reviews

There are no reviews yet.

Be the first to review “ಅವಿಶ್ರಾಂತ ಧ್ಯೇಯಜೀವಿ ಮೈ. ಚ. ಜಯದೇವ: ಬದುಕು –ನೆನಪು- Avishrant Dhyeyjivi”

Select at least 2 products
to compare